ಬೆಂಗಳೂರು: ಬುಧವಾರ ಸಂಜೆ ಅಥವಾ ಗುರುವಾರದೊಳಗೆ ವಿರೋಧ ಪಕ್ಷ ನಾಯಕನನ್ನು ನೇಮಿಸಲಾಗುತ್ತದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪರವರು ಜು.5 ರಂದು ಮಾಧ್ಯಮದವರ ಜೊತೆ ಮಾತನಾಡಿದರು.
ಸರ್ಕಾರವು ಚುನಾವಣೆ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಬೇಕು. ಅವು ಅನುಷ್ಠಾನಗೊಳ್ಳುವವರೆಗೂ ಸದನದ ಹೊರಗೆ ಹಾಗೂ ಸದನದ ಒಳಗೆ ನಿರಂತರ ಹೋರಾಟ ನಡೆಸುತ್ತೇವೆ ಎಂದರು.
ಕರ್ನಾಟಕವನ್ನು ಬರಪೀಡಿತ ರಾಜ್ಯವೆಂದು ಘೋಷಣೆ ಮಾಡಿ’ ಎಂದು ಯಡಿಯೂರಪ್ಪ ಒತ್ತಾಯಿಸಿದರು. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಇಲ್ಲ. ಯಾವ ಭಾಗದಲ್ಲೂ ಶೇಕಡ 10ರಷ್ಟೂ ಬಿತ್ತನೆ ಕಾರ್ಯ ನಡೆದಿಲ್ಲ. ಜಲಾಶಯಗಳ ಒಡಲೂ ಬರಿದಾಗಿವೆ. ಒಟ್ಟರೆಯಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ಸರ್ಕಾರವು ಬರ ಪೀಡಿತ ರಾಜ್ಯವೆಂದು ಘೋಷಿಸಲು ಮೀನಮೇಷ ಎಣಿಸುತ್ತಿದೆ ಎಂದು ಹೇಳಿದರು.