ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಲೀಲಮ್ಮನ ಅಂತ್ಯಕ್ರಿಯೆ

Share with

ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರ ಅಂತ್ಯ ಸಂಸ್ಕಾರವನ್ನು ಸರಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ನೆರವೇರಿಸಲಾಗುವುದು, ಸರಕಾರ ಮತ್ತು ಲೀಲಾವತಿ ಅವರ ಕುಟುಂಬದೊಂದಿಗೆ ಚರ್ಚಿಸಿ ಈ  ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿದೆ. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು, ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಬೆಳಗ್ಗೆ 10 ಗಂಟೆವರೆಗೂ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲೇ ಪಾರ್ಥೀವ ಶರೀರ ಇರಿಸಲಾಗುತ್ತಿದ್ದು, ನಂತರ ಬೆಂಗಳೂರಿನತ್ತ ತಗೆದುಕೊಂಡು ಹೋಗಲಾಗುವುದು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿರುವ ಸಂಸ ಬಯಲು ರಂಗ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ಸಿದ್ಧರಾಮಯ್ಯ ಸೇರಿದಂತೆ ಸಚಿವ ಸಂಪುಟದ ಅನೇಕ ಸಚಿವರು ಹಾಗೂ ಚಿತ್ರೋದ್ಯಮದ ಗಣ್ಯರು ಆಗಮಿಸಿ, ಅಂತಿಮ ದರ್ಶನ ಪಡೆಯಲಿದ್ದಾರೆ. ಮಧ್ಯಾಹ್ನ 3 ರ ಬಳಿಕ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ.


Share with

Leave a Reply

Your email address will not be published. Required fields are marked *