![ವೇಗವಾಗಿ ಸಾಗುತಿದ್ದ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸಾವಿಗೀಡಾದ ಘಟನೆ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ನಡೆದಿದೆ.](https://i0.wp.com/veekshakavani.com/wp-content/uploads/2023/10/ಚಿರತೆ-ಸಾವು.jpg?resize=640%2C400&ssl=1)
ಕಾರ್ಕಳ: ವೇಗವಾಗಿ ಸಾಗುತಿದ್ದ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸಾವಿಗೀಡಾದ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ.
ಕಾರ್ಕಳದಿಂದ ಮುದ್ರಾಡಿಕಡೆಗೆ ವೇಗವಾಗಿ ಸಾಗುತಿದ್ದ ಇನ್ನೋವಾ ಕಾರು ಚಿರತೆಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.