ಮಂಜೇಶ್ವರ : ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಿಡಿಲ ಬಡಿತಕ್ಕೆ ಶಾಲಾ ಕಟ್ಟಡ ಹಾಗೂ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. 19.6.2024 ಬೆಳಿಗ್ಗೆ ಸುಮಾರು 11:00 ಗಂಟೆಗೆ ಶಾಲಾ ಸಮೀಪ ಸಿಡಿಲು ಬಡಿದು ವಿದ್ಯುತ್ ಉಪಕರಣಗಳ ತೀವ್ರ ಹಾನಿಯ ಜೊತೆಗೆ ಕಟ್ಟಡಕ್ಕೆ ಲಘು ಹಾನಿಯಾಗಿದ್ದು ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳು ಶಾಲೆಯಲ್ಲಿದ್ದು ಯಾವುದೇ ಪ್ರಾಣಾಪಾಯ ಸಂಭವಿಸದೆ ಪಾರಾಗಿದ್ದಾರೆ.ಸ್ಥಳಕ್ಕೆ ಮೀಂಜ ಗ್ರಾಮ ಪಂಚಾಯತಿನ ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿ, ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಸರಸ್ವತಿ ಕೆ, ಕ್ಷೇಮ ಸ್ಥಾಯೀ ಸಮಿತಿ ಅಧ್ಯಕ್ಷರಾದ ಬಾಬು ಸಿ. ಕುಳೂರು, ವಾರ್ಡ್ ಸದಸ್ಯರಾದ ಜನಾರ್ಧನ ಪೂಜಾರಿ ಕುಳೂರು, ಪಂಚಾಯತು ಪ್ರಭಾರ ಸೆಕ್ರೆಟರಿ ನಾರಾಯಣ, ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್ ವಿ, ಮಂಜೇಶ್ವರ ಉಪಜಿಲ್ಲಾ ಪ್ರಭಾರ ವಿದ್ಯಾಧಿಕಾರಿ ಜಿತೇಂದ್ರ ಜಿ.ಎಚ್, ಎಂ.ಡಿ.ಎಂ. ಅಧಿಕಾರಿ ಶ್ರೀ ಪ್ರದೀಪ್, ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಎಲಿಯಾಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲ, ಉಪಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಪೊಯ್ಯೇಲು ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ ಮೊದಲಾದವರು ಸ್ಥಳಕ್ಕೆ ಭೇಟಿ ಪರಿಶೀಲಿಸಿದರು.