ಬಿಜೆಪಿ ಲೋಕಸಭಾ ಚುನಾವಣೆಗೆ ತನ್ನ ಮೊದಲ ಪಟ್ಟಿ ರಿಲೀಸ್ ಮಾಡಿದ್ದು, 16 ರಾಜ್ಯಗಳ 195 ಕ್ಷೇತ್ರಗಳಿಗೆ ಅಭ್ಯರ್ಥಿಯ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ.
ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ಮಾಡಲಿದ್ದಾರೆ ಎಂದು ಘೋಷಣೆಯಾಗಿದೆ.
ಕೇರಳದ ಕಾಸರಗೋಡು ಕ್ಷೇತ್ರದಿಂದ ಎಂಎಲ್ ಅಶ್ವಿನಿಗೆ ಟಿಕೆಟ್ ನೀಡಲಾಗಿದೆ. ಅದೇ ರೀತಿ ಎ.ಕೆ. ಆಯಂಟನಿ ಪುತ್ರ ಅನಿಲ್ ಆಯಂಟನಿ, ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಟಿಕೆಟ್ ನೀಡಲಾಗಿದೆ.
ರಾಜ್ಯವಾರು ಪ್ರಕಾರ ಉತ್ತರ ಪ್ರದೇಶದಲ್ಲಿ 51, ಪಶ್ಚಿಮ ಬಂಗಾಳ 20, ಮಧ್ಯಪ್ರದೇಶ 24, ಗುಜರಾತ್, ರಾಜಸ್ಥಾನ 15, ಕೇರಳ 12, ಉತ್ತರಾಖಂಡ 3 ಹಾಗೂ ಗೋವಾದ 1 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗಿದೆ