ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದಾಗಿ ದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಲಾಕ್‌ಡೌನ್ ಅನಿವಾರ್ಯ ಎಂಬ ಮಾತುಗಳು ಕೇಳಿಬರುತ್ತಿರುವುದು ಗೊತ್ತೇ ಇದೆ. ಆದರೆ, ಈ ಲಾಕ್‌ಡೌನ್ ವದಂತಿಯನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ ಹಾಕಿದ್ದಾರೆ.

ಇದು ಸಂಪೂರ್ಣ ಸುಳ್ಳು ಸುದ್ದಿ, ಕೇಂದ್ರ ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ, ಯಾವುದೇ ರೀತಿಯ ಬಿಕ್ಕಟ್ಟುಗಳನ್ನು ಎದುರಿಸಲು ನಾವು ಸಂಪೂರ್ಣ ಸಿದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.




