ಲೋಕಸಭಾ ಚುನಾವಣೆ: 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Share with

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾ.8ರಂದು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್‌, ಅಜಯ್ ಮಕೇನ್‌, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು.

39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಕರ್ನಾಟಕದ 7, ತೆಲಂಗಾಣದ 4, ಛತ್ತೀಸ್​ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಿಕ್ಕಿಂ​ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಈ ಮೂಲಕ ಒಟ್ಟು 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡಗಡೆ ಮಾಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನು ಶಶಿ ತರೂರ್​ ಅವರಿಗೆ ತಿರುವನಂತಪುರಂ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟ:

ಹಾವೇರಿ – ಆನಂದಸ್ವಾಮಿ ಗಡ್ಡದೇವ್ರು ಮಠ
ತುಮಕೂರು – ಮುದ್ದಹನುಮೇಗೌಡ – ಒಕ್ಕಲಿಗ
ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್ – ಈಡಿಗ
ಹಾಸನ – ಶ್ರೇಯಸ್ ಪಟೇಲ್ – ಒಕ್ಕಲಿಗ
ವಿಜಯಪುರ – ರಾಜು ಆಲಗೂರು – ಎಸ್.ಸಿ
ಮಂಡ್ಯ – ವೆಂಕಟರಮಣೇಗೌಡ (ಸ್ಟಾರ್ ಚಂದ್ರು) – ಒಕ್ಕಲಿಗ
ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್ – ಒಕ್ಕಲಿಗ

ತೆಲಂಗಾಣದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟ :

ಜಹೀರಾಬಾದ್ ಕ್ಷೇತ್ರ- ಸುರೇಶ್ ಕುಮಾರ್ ಶೆಟ್ಕರ್
ಚೇವೆಲ್ಲಾ ಕ್ಷೇತ್ರ ಸುನೀತಾ ಮಹೇಂದರ್ ರೆಡ್ಡಿ
ನಲ್ಗೊಂಡ ಕ್ಷೇತ್ರ- ಕುಂದೂರು ರಘುವೀರ್
ಮಹಬೂಬಾಬಾದ್ ಕ್ಷೇತ್ರ (ಎಸ್‌ಟಿ )- ಪೋರಿಕ ಬಲರಾಮ್ ನಾಯಕ್​ಗೆ ಟಿಕೆಟ್​ ನೀಡಲಾಗಿದೆ.

ಕೇರಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ:

ವಯನಾಡ್ (ಕೇರಳ): ರಾಹುಲ್ ಗಾಂಧಿ
ಕಾಸರಗೋಡು (ಕೇರಳ): ರಾಜಮೋಹನ್ ಉಣ್ಣಿತ್ತಾನ್
ಕಣ್ಣೂರು (ಕೇರಳ): ಕೆ ಸುಧಾಕರನ್
ವಡಕರ (ಕೇರಳ): ಶಫಿ ಪರಂಬಿಲ್
ಕೋಝಿಕ್ಕೋಡ್ (ಕೇರಳ): ಎಂಕೆ ರಾಘವನ್
ಪಾಲಕ್ಕಾಡ್ (ಕೇರಳ): ವಿಕೆ ಶ್ರೀಕಂಠನ್
ಅಲತೂರ್(ಎಸ್‌ಸಿ) (ಕೇರಳ): ರೆಮ್ಯಾ ಹರಿದಾಸ್
ತ್ರಿಶೂರ್ (ಕೇರಳ): ಕೆ ಮರಳೀಧರನ್
ಚಾಲಕ್ಕುಡಿ (ಕೇರಳ): ಬೆನ್ನಿ ಬಹನ್ನಾನ್
ಎರ್ನಾಕುಲಂ(ಕೇರಳ): ಹಿಬಿ ಇಡೆನ್
ಇಡುಕ್ಕಿ(ಕೇರಳ): ಡೀನ್ ಕುರಿಯಾಕೋಸ್
ಮಾವೇಲಿಕರ(ಎಸ್‌ಸಿ)(ಕೇರಳ): ಕೋಡಿಕುನ್ನಿಲ್ ಸುರೇಶ್
ಪಟ್ಟಣಂತಿಟ್ಟ(ಕೇರಳ): ಆ್ಯಂಟೋ ಆ್ಯಂಟೋನಿ
ಅತ್ತಿಂಗಲ್(ಕೇರಳ): ಅಡೂರ್ ಪ್ರಕಾಶ್


Share with

Leave a Reply

Your email address will not be published. Required fields are marked *