ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಎರಡನೇ ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ಈಗಾಗಲೇ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಏಳು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಇದೀಗ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಇದರೊಂದಿಗೆ ಒಟ್ಟು 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ನಾಲ್ಕು ಕ್ಷೇತ್ರಗಳು ಮಾತ್ರ ಬಾಕಿ ಉಳಿದುಕೊಂಡಿವೆ.