ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ ಅಗರ್ವಾಲ್ ಸೇರಿದಂತೆ ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾ.6ರಂದು ತಲಪಾಡಿ, ದೇವಿನಗರ, ಮುಡಿಪುಗಳಲ್ಲಿ ರಚಿಸಲಾದ ಚೆಕ್ ಪೋಸ್ಟ್ ಗಳಲ್ಲಿ ತಪಾಸಣಾ ಕಾರ್ಯವನ್ನು ಪರಿಶೀಲಿಸಿದರು.