ಮಂಗಳೂರು: ಲೋಕಸಭಾ ಚುನಾವಣೆ: 23 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದ ಜಿಲ್ಲಾಡಳಿತ

Share with

ಮಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯಲ್ಲಿ 23 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ.

23 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದ ಜಿಲ್ಲಾಡಳಿತ

ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ 23 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿರುವ ಜಿಲ್ಲಾಡಳಿತ ಜಿಲ್ಲೆಯಲ್ಲಿನ ಹಣ ಸಾಗಾಟದ ಮೇಲೆ ತೀವ್ರ ನಿಗಾ ವಹಿಸಿದೆ.

ಕೇರಳದ ಕಾಸರಗೋಡಿನಲ್ಲಿ ಕೂಡ ಏ.26ರಂದು ಚುನಾವಣೆ ನಡೆಯುತ್ತಿರುವುದರಿಂದ ಗಡಿಯಲ್ಲಿ ಎರಡೂ ರಾಜ್ಯಗಳ ಪೊಲೀಸರು ಮತ್ತು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿನ 23 ಚೆಕ್ ಪೋಸ್ಟ್ ಗಳಲ್ಲಿ ಅಂತರ್ ರಾಜ್ಯ 9, ಅಂತರ್ ರಾಜ್ಯ 7 ಹಾಗೂ ಸ್ಥಳೀಯ 7 ಚೆಕ್ ಪೋಸ್ಟ್ ಗಳಿವೆ.


Share with

Leave a Reply

Your email address will not be published. Required fields are marked *