ಎರ್ಮಾಳು: ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಘಟನೆ ಎರ್ಮಾಳು ಕಲ್ಯಾಣಿ ಪೆಟ್ರೋಲ್ ಪಂಪ್ ಬಳಿ ಗುರುವಾರ ಮುಂಜಾನೆ ಸಂಭವಿಸಿದೆ.

ಅದೃಷ್ಟವಷತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ಲಾರಿ ಚಾಲಕ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು, ನಿದ್ದೆ ಮಂಪರ್ ನಲ್ಲಿ ಲಾರಿ ಚಲಾಯಿಸಿದ ಕಾರಣ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಘಟನೆಯಲ್ಲಿ ಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾನೆ.




