ರಾಯಚೂರು: ಹೋಟೆಲ್‌ಗಳ ಮೇಲೆ ಬಿದ್ದ ಲಾರಿ

Share with

ರಾಯಚೂರು ನಗರದ ಹೊರವಲಯದ ಯರಮರಸ್ ಬೈಪಾಸ್ ಬಳಿ ಭತ್ತದ ಹೊಟ್ಟು ತುಂಬಿದ್ದ ಲಾರಿ ಪಲ್ಟಿಯಾಗಿದೆ.

ಚೈನೀಸ್ ಫಾಸ್ಟ್ ಫುಡ್ ಸೆಂಟರ್ ಹಾಗೂ ಹೋಟೆಲ್ ಮೇಲೆ ಅದು ಉರುಳಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಜಖಂ ಆಗಿವೆ.

ಓವರ್ ಲೋಡಾಗಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದ್ದು ಸ್ಥಳದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಚೂರಿನಿಂದ ಹೈದ್ರಾಬಾದ್‌ ಕಡೆಗೆ ಈ ಲಾರಿ ಹೊರಟಿತ್ತು.


Share with