ಉಡುಪಿ: ಪರವಾನಿಗೆ ಸಮಸ್ಯೆಯ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಜಿಲ್ಲಾ ಕಟ್ಟಡ ಸಾಮಗ್ರಿ ಲಾರಿ ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟವು ಅ.3ರಂದು ಉಡುಪಿ ಜಿಲ್ಲಾ ಬಂದ್ ನಡೆಸಲು ತೀರ್ಮಾನಿಸಿದೆ.
ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ, ಜಿಲ್ಲಾ ಎಸ್‌ಪಿ ಡಾ| ಅರುಣ್ ಕೆ. ಅವರು ಐವರು ಶಾಸಕರ ಸಮ್ಮುಖದಲ್ಲಿ ಲಾರಿ, ಟೆಂಪೋ ಮಾಲಕರ ಸಭೆ ನಡೆಸಿದ್ದರೂ ಸಮಸ್ಯೆ ಬಗೆಹರಿಯಲಿಲ್ಲ.
ಹೀಗಾಗಿ ಒಕ್ಕೂಟದ 12 ವಲಯದ ಅಧ್ಯಕ್ಷರು ಸೇರಿದಂತೆ ಪ್ರಮುಖರು ಶುಕ್ರವಾರ ಸಭೆ ನಡೆಸಿ, ಅ.3ರಂದು ಬಂದ್‌ಗೆ ಕರೆ ನೀಡಿದ್ದಾರೆ.
ಬಂದ್ ಸಂಬಂಧ ಶನಿವಾರ ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಒಕ್ಕೂಟದ ಪ್ರತಿನಿಧಿ ರಾಘವೇಂದ್ರ ಶೆಟ್ಟಿ ಅವರು ತಿಳಿಸಿದ್ದಾರೆ.