ಸುಬ್ರಹ್ಮಣ್ಯ: ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.28ರ ಶನಿವಾರದಂದು ಚಂದ್ರಗ್ರಹಣ ಇರುವುದರಿಂದ ಭಕ್ತರಿಗೆ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ರಾತ್ರಿಯ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯವಾಗಲಿದ್ದು ಬಳಿಕ ದೇವರ ದರ್ಶನ ಇರುವುದಿಲ್ಲ. ಶನಿವಾರ ಸಂಜೆಯ ಆಶ್ಲೇಷಾ ಬಲಿ ಹಾಗೂ ರಾತ್ರಿಯ ಅನ್ನದಾನ ಸೇವೆ ಇರುವುದಿಲ್ಲ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.