ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಾ.12ರಂದು ಭೇಟಿ ದೇವರ ದರ್ಶನ ಪಡೆದರು.


ಆ ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿಯಾಗಿ ಅನುಗ್ರಹ ಮಂತ್ರಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುತ್ತಿಗೆ ಶ್ರೀಗಳ ವಿಶ್ವ ಗೀತಾ ಪರ್ಯಾಯದ ಪವಿತ್ರ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞದಿಂದ ಪ್ರಭಾವಿತರಾಗಿ ಅವರು ದೀಕ್ಷೆ ಪಡೆದರು.