ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿ ಗಡಿಪಾರು..!

Share with

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಪುತ್ತೂರು ಎ.ಸಿ ಗಡಿಪಾರು ಆದೇಶ ಮಾಡಿದ್ದಾರೆ. ಪುತ್ತೂರು ಎ.ಸಿ. ಸೇಲಾ ವರ್ಗಿಸ್ ಡಿ.17ರಂದು ಉಜಿರೆಯ ಮಹೇಶ್ ಶೆಟ್ಟಿಯನ್ನು ಈ ಹಿಂದಿನ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು.

ಗಡಿಪಾರು ಆದೇಶ ಪ್ರತಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಬಂದ ಮೇರೆಗೆ ಡಿ.18ರಂದು ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿನ್ ಜಾರಿ ಮಾಡಲು ಮುಂದಾಗಿದ್ದರು ಆದರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.


Share with

Leave a Reply

Your email address will not be published. Required fields are marked *