ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆಗಾಗಿ ಬೆಂಗಳೂರಿನ ವೈಟ್ಫೀಲ್ಡ್ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. 6 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 30 ಕಡೆ ದಾಳಿ ನಡೆಸಿ, ಅನುಮಾನಾಸ್ಪದವಾಗಿ ಕಂಡುಬಂದ 40 ಮಂದಿಯನ್ನು ವಶಕ್ಕೆ ಪಡೆದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ವರ್ತೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ಶೆಡ್ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ನೂರಕ್ಕೂ ಹೆಚ್ಚು ಶೆಡ್ಗಳಿರುವ ಪ್ರದೇಶಗಳಲ್ಲೂ ಕಾರ್ಯಾಚರಣೆ ಕೈಗೊಂಡಿದೆ.




