ವೀಡಿಯೋ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ ಯುವಕ! ಕಟ್ಟತ್ತಾರು ನಿವಾಸಿ ನಾಸಿರ್ ಗಂಭೀರ

Share with

ಪುತ್ತೂರು: ಮಾಡಾವು ಕಟ್ಟತ್ತಾರು ನಿವಾಸಿ ನಾಸಿರ್ ಎಂಬ ಯುವಕ ವೀಡಿಯೋ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ ಘಟನೆ ಆ.22ರಂದು ನಡೆದಿದೆ.

ತಾನು ಚಾಲಕ ವೃತ್ತಿ ಮಾಡುತ್ತಿದ್ದು, ಮಾಲಕರು ತನಗೆ ಹಲ್ಲೆ ನಡೆಸಿದ್ದಾರೆ. ಆದ್ದರಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ವೀಡಿಯೋ ಮಾಡಿದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.


Share with

Leave a Reply

Your email address will not be published. Required fields are marked *