ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ

Share with

ತಲಪಾಡಿ : ಇಲ್ಲಿನ ಕೆ.ಸಿ ರೋಡ್ ಫಲಾಹ್ ಶಾಲಾ ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಎಮ್ ಡಿಎಮ್‌ಎ ಕ್ರಿಸ್ಟಲ್ ಮಾದಕ ವಸ್ತುವಿನ ಮಾರಾಟದಲ್ಲಿ ತೊಡಗಿದ್ದ ಕೇರಳದ ಉಪ್ಪಳ, ಮಂಗಲ್ಪಾಡಿ ನಿವಾಸಿ ಶೇಖ್ ಮೊಹಮ್ಮದ್ ಕೈಫ್ (22)ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಕೃತ್ಯದಲ್ಲಿ ತೊಡಗಿದ್ದ ಮತ್ತಿಬ್ಬರು ಪರಾರಿಯಾಗಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಕೈಫ್ ನಿಂದ 55,000/- ರೂಪಾಯಿ ಬೆಲೆ ಬಾಳುವ ನಿಷೇಧಿತ 11 ಗ್ರಾಂ ಎಮ್ ಡಿಎಮ್‌ ಕ್ರಿಸ್ಟಲ್ ಮತ್ತು ಕೃತ್ಯಕ್ಕೆ ಬಳಸಿದ್ದ 1 ತೂಕ ಮಾಪನ, 500 ರೂ.ನಗದು ಮತ್ತು 1 ಮೊಬೈಲ್ ಫೋನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಉಳ್ಳಾಲ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದಾಗ ಇತರ ಆರೋಪಿಗಳಾದ ಶಮೀರ್ ಕಾಂಬ್ಳೆ ಮತ್ತು ಜಾವೀದ್ ಬೈಕಲ್ಲಿ ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಶೇಖ್ ಮೊಹಮ್ಮದ್ ಕೈಫ್ ನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


Share with

Leave a Reply

Your email address will not be published. Required fields are marked *