ಮಂಗಳೂರು: ಕಂಕನಾಡಿ ಬಳಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಡಿ.17ರಂದು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಜೇಶ್ವರದ ನಿವಾಸಿ ಪ್ರಶ್ವಿತ್ (25) ಎಂದು ಗುರುತಿಸಲಾಗಿದೆ. ಆರೋಪಿಯು 500 ರೂಪಾಯಿ, 200 ರೂಪಾಯಿ, 100 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9 ಸಾವಿರ ರೂಪಾಯಿ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಆರೋಪಿಯಿಂದ 500 ರೂಪಾಯಿ ಮುಖಬೆಲೆಯ 3 ನೋಟುಗಳು, 200 ರೂಪಾಯಿ ಮುಖಬೆಲೆಯ 2 ನೋಟುಗಳು, 100 ರೂಪಾಯಿ ಮುಖ ಬೆಲೆಯ 3 ನೋಟುಗಳು ಹಾಗೂ 10 ಸಾವಿರ ರೂಪಾಯಿ ಅಂದಾಜು ಮೌಲ್ಯದ ಮೊಬೈಲ್ ಫೋನ್ ಹಾಗೂ 4250 ರೂಪಾಯಿ ಅಸಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ನಗರ ಮಾನ್ಯ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ರವರ ಮಾರ್ಗದರ್ಶನದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ರವರ ನೇತೃತ್ವದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದಾರೆ.