ವೈಕುಂಠ ಏಕಾದಶಿ ಕಾರ್ಯಕ್ರಮದ ವೇಳೆ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ವ್ಯಕ್ತಿ

Share with

ತಿರುಪುರ, ಡಿಸೆಂಬರ್ 31: ವೈಕುಂಠ ಏಕಾದಶಿ(Vaikunta Ekadashi) ಕಾರ್ಯಕ್ರಮದ ವೇಳೆ ದೇವಸ್ಥಾನದ ಸಮೀಪ ವ್ಯಕ್ತಿಯೊಬ್ಬ ಪೊಲೀಸ್ ಅಧಿಕಾರಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನ ತಿರುಪುರದಲ್ಲಿ ಡಿ.30ರಂದು ನಡೆದಿದೆ. ಧಾರ್ಮಿಕ ಕಾರ್ಯಕ್ರಮ ಸಮಯದಲ್ಲಿ ಈ ಘಟನೆ ನಡೆದಿದ್ದು, ಜನರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತವಾಗಿತ್ತು. ಪೊಲೀಸ್ ಕಾನ್ಸ್ಟೆಬಲ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ, ಪೊಲೀಸರ ಪ್ರಕಾರ ಡಿಸೆಂಬರ್ 30ರಂದು ವೀರರಾಘವ ಪೆರುಮಾಳ್ ದೇವಸ್ಥಾನದ ಹೊರಗೆ ಈ ಘಟನೆ ನಡೆದಿದ್ದು, ಅಲ್ಲಿ ಉತ್ಸವವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯ ಭಕ್ತರು ಸೇರಿದ್ದರು.

ಆ ವ್ಯಕ್ತಿ ಭಕ್ತರ ಮೇಲೆ ಹಲ್ಲೆಗೆ ಮುಂದಾಗಿದ್ದ ಅಧಿಕಾರಿಗಳು ತಿಳಿಸಿದ್ದಾರೆ, ಈ ಸಂದರ್ಭದಲ್ಲಿ ಸ್ಥಳದಲ್ಲಿ ನಿಯೋಜಿಸಲಾದ ಪೊಲೀಸ್ ಕಾನ್‌ಸ್ಟೆಬಲ್ ಮಧ್ಯಪ್ರವೇಶಿಸಿದ್ದರು ಆಗ ಅವರ ಮೇಲೂ ಹಲ್ಲೆಗೆ ಯತ್ನಿಸಿದ್ದ. ವೈರಲ್ ಆಗಿರುವ ವೀಡಿಯೊದಲ್ಲಿ, ಆ ವ್ಯಕ್ತಿ ಪೊಲೀಸರನ್ನು ಆಕ್ರಮಣಕಾರಿಯಾಗಿ ಬೆನ್ನಟ್ಟುತ್ತಿರುವುದನ್ನು ಕಾಣಬಹುದು, ಆದರೆ ಪೊಲೀಸ್ ಸಿಬ್ಬಂದಿ ರಕ್ಷಣಾತ್ಮಕ ಕ್ರಮವಾಗಿ ತಮ್ಮ ಬೆಲ್ಟ್‌ಗಳನ್ನು ಬಳಸಿ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ನಂತರ ಪೊಲೀಸರು ಆ ವ್ಯಕ್ತಿಯನ್ನು ಸುರಕ್ಷಿತವಾಗಿ ತಿರುಪುರ್ ದಕ್ಷಿಣ ಪೊಲೀಸ್ ಠಾಣೆಗೆ ಕರೆದೊಯ್ದರು.

ತಿರುಪುರ ಜಿಲ್ಲೆಯಲ್ಲಿ ದೇವಾಲಯ ಉತ್ಸವದ ಸಂದರ್ಭದಲ್ಲಿ ಯುವಕನೊಬ್ಬ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ. ಆತ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗಿದ್ದಾನೆ. ಮತ್ತು ಒಬ್ಬ ಕಾನ್‌ಸ್ಟೆಬಲ್ ಅವನನ್ನು ತಡೆಯಲು ಪ್ರಯತ್ನಿಸಿದಾಗ, ಅವನು ಹೆಚ್ಚು ಚಾಕುವಿನಿಂದ ಹಲ್ಲೆ ಮಾಡಲು ಪ್ರಯತ್ನಿಸಿದ್ದಾನೆ. ಪೊಲೀಸರು ಯುವಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಯುವಕ ಮಾನಸಿಕ ಅಸ್ವಸ್ಥನಂತೆ ಕಂಡಿದ್ದಾನೆ ಮತ್ತು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾನೆ. ವೈದ್ಯರು ಮಾನಸಿಕ ಸಮಸ್ಯೆಗಳನ್ನು ದೃಢಪಡಿಸಿದರೆ, ಮುಂದಿನ ಕ್ರಮವನ್ನು ಕೈಬಿಡಬಹುದು. ಆತ ಮಾನಸಿಕವಾಗಿ ಸದೃಢನೆಂದು ಕಂಡುಬಂದರೆ, ಜೈಲಿಗೆ ಕಳುಹಿಸಲಾಗುತ್ತದೆ. ಸ್ಥಳೀಯರು ಮಾತನಾಡಿ, ಈ ಹಿಂದೆಯೂ ಈ ಪ್ರದೇಶದಲ್ಲಿ ಆತ ಆಕ್ರಮಣಕಾರಿಯಾಗಿ ವರ್ತಿಸಿದ್ದಾನೆ ಎಂದು ಹೇಳಿದ್ದಾರೆ.


Share with

Leave a Reply

Your email address will not be published. Required fields are marked *