ಕಾಸರಗೋಡು: ಆಮ್ಲೆಟ್ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬದಿಯಡ್ಕದಲ್ಲಿ ರವಿವಾರ ಸಂಜೆ ವರದಿಯಾಗಿದೆ.

ಮೃತ ವ್ಯಕ್ತಿ ಬದಿಯಡ್ಕ ಚುಳ್ಳಿಕ್ಕಾನದ ನಿವಾಸಿಯಾಗಿದ್ದು, ಪ್ರಸ್ತುತ ಬಾರಡ್ಕದಲ್ಲಿ ವಾಸವಾಗಿದ್ದ ವಿನ್ಸೆಂಟ್ ಕ್ರಾಸ್ತಾ (52 2) ಎಂದು ತಿಳಿದು ಬಂದಿದೆ.
ರವಿವಾರ ಸಂಜೆ ಮನೆಯ ಬಳಿಯ ಗೂಡಂಗಡಿಯಲ್ಲಿ ಆಮ್ಲೆಟ್ ಸೇವಿಸುತ್ತಿದ್ದಾಗ ಗಂಟಲಲ್ಲಿ ಸಿಲುಕಿ ಉಸಿರಾಟದ ತೊಂದರೆಯಾಗಿದೆ. ತಕ್ಷಣ ಕುಂಬಳೆ ಆಸ್ಪತ್ರೆಗೆ ಕರೆದೊಯ್ದರೂ, ಅವರು ಆಗಲೇ ಕೊನೆಯುಸಿರೆಳೆದಿದ್ದರು ಎಂದು ವೈದ್ಯರು ದೃಢಪಡಿಸಿದ್ದಾರೆ.
ವಿನ್ಸೆಂಟ್ ಕ್ರಾಸ್ತಾ ಅವಿವಾಹಿತರಾಗಿದ್ದು, ಬೇಳ ಕಟ್ಟತ್ತಂಗಡಿಯ ವೆಲ್ಲಿಂಗ್ ಕಾರ್ಯಾಗಾರದಲ್ಲಿ ಕೆಲಸ ಮಾಡುತ್ತಿದ್ದರು. ಬದಿಯಡ್ಕ ಪೊಲೀಸರು ಸ್ಥಳದಲ್ಲಿ ಮಹಜರು ನಡೆಸಿ, ಅಸಹಜ ಮರಣ ಪ್ರಕರಣ ದಾಖಲಿಸಿಕೊಂಡಿದ್ದಾರೆ.




