ಮಂಗಳೂರು: ಲಾಡ್ಜ್ ನ ರೂಮ್ ವೊಂದರಲ್ಲಿ ಕಾಣಿಸಿಕೊಂಡ ಬೆಂಕಿ

Share with

ಮಂಗಳೂರು: ನಗರದ ಬೆಂದೂರ್ ವೆಲ್ ನ ಲಾಡ್ಜ್ ರೂಮ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಬೆಂದೂರ್ ವೆಲ್ ನ ಲಾಡ್ಜ್ ರೂಮ್ ವೊಂದರಲ್ಲಿ ಕಾಣಿಸಿಕೊಂಡ ಬೆಂಕಿ.

ಯಶ್ರಾಜ್ ಎಸ್. ಸುವರ್ಣ(43) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ನಗರದ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ಮಧ್ಯರಾತ್ರಿ ಬಳಿಕ‌ ಸುಮಾರು 12:35 ಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಯಶ್ರಾಜ್ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿದ್ದು, ಬಾಗಿಲಿನ ಚಿಲಕ ಹಾಕಿಕೊಂಡಿದ್ದರು.‌ ಅನಂತರ ಲಾಡ್ಜ್ ನವರು ತೆರೆದಾಗ ಬೆಂಕಿ ಆವರಿಸಿತ್ತು. ಅಗ್ನಿಶಾಮಕದವರಿಗೆ ಮಾಹಿತಿ ತಿಳಿಸಿದರು ಎನ್ನಲಾಗಿದೆ.

ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *