ಮಂಗಳೂರು: ನಗರದ ಹೊರವಲಯದಲ್ಲಿ ಯುವಕನ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ.

ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಎಂಬ ಯುವಕ ದಾಳಿಗೊಳಗಾಗಿದ್ದು, ಕೈಗೆ ತರಚಿದ ಗಾಯಗಳಾಗಿ ಮೂಡಬಿದ್ರೆಯ ಆಸ್ಪತ್ರಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
ಬೈಕ್ ನಲ್ಲಿ ತಲವಾರು ಹಿಡಿದು ಸಾಗುತ್ತಿದ್ದವರನ್ನು ಅಖಿಲೇಶ್ ಮೊಬೈಲ್ ನಲ್ಲಿ ವೀಡಿಯೋ ಮಾಡಿದ್ದು, ಅದನ್ನು ಆಕ್ಷೇಪಿಸಿ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಬೈಕ್ ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳಿಂದ ದಾಳಿ ನಡೆದಿದೆ.ಓರ್ವ ಆರೋಪಿಯನ್ನು ಸ್ಥಳೀಯರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ತೆರಳಿ ಬಜಪೆ ಠಾಣೆಯ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.




