ಮಂಗಳೂರು: 65.33 ಲಕ್ಷ ಮೌಲ್ಯದ ಮಾದಕ ವಸ್ತು ನಾಶ

Share with

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್‍ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಸುಮಾರು 220.825 ಕೆಜಿ ಗಾಂಜಾ ಸೇರಿದಂತೆ ಒಟ್ಟು 65,33.280 ರೂ. ಮೌಲ್ಯದ ಮಾದಕ ವಸ್ತುಗಳನ್ನು ಫೆ.9ರಂದು ಜಿಲ್ಲಾ ಮಾದಕ ವಸ್ತು ವಿಲೇವಾರಿ ಕಮಿಟಿ ಮೂಲಕ ವಿಲೇವಾರಿ ಮಾಡಲಾಯಿತು.

ಒಟ್ಟು 65,33.280 ರೂ. ಮೌಲ್ಯದ ಮಾದಕ ವಸ್ತುಗಳನ್ನು ಫೆ.9ರಂದು ಜಿಲ್ಲಾ ಮಾದಕ ವಸ್ತು ವಿಲೇವಾರಿ ಕಮಿಟಿ ಮೂಲಕ ವಿಲೇವಾರಿ ಮಾಡಲಾಯಿತು.

ನಗರ ಪೊಲೀಸ್ ಕಮಿಷನರ್ ಅನುಪರ್ ಅಗರ್ವಾಲ್ ಸಮ್ಮುಖದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಮೂಲ್ಕಿಯ ಸಸ್ಟೇನಬಿಲಿಟಿ ಹೆಲ್ತ್‌ಕೇರ್ ಸೊಲ್ಯೂಷನ್ಸ್ ಲಿಮಿಟೆಡ್‍ನಲ್ಲಿ ಇವುಗಳನ್ನು ನಾಶ ಮಾಡಲಾಯಿತು.

ಮೂಲ್ಕಿಯ ಸಸ್ಟೇನಬಿಲಿಟಿ ಹೆಲ್ತ್‌ಕೇರ್ ಸೊಲ್ಯೂಷನ್ಸ್ ಲಿಮಿಟೆಡ್‍ನಲ್ಲಿ ಮಾದಕ ವಸ್ತುಗಳನ್ನು ನಾಶ ಮಾಡಲಾಯಿತು.

ಕಮಿಷನರೇಟ್ ವ್ಯಾಪ್ತಿಯ 9 ಠಾಣೆಗಳಲ್ಲಿ ಒಟ್ಟು 34 ಪ್ರಕರಣಗಳಲ್ಲಿ 220.825 ಕೆ.ಜಿ ಗಾಂಜಾ, 193.151 ಗ್ರಾಂ ಎಂಡಿಎಂಎ, 30 ಗ್ರಾಂ ಮೆಥಾಆಂಫೆಟಮೈನ್ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಎಸ್ಪಿ ರಿಷ್ಯಂತ್ ಸಿ.ಬಿ ಅವರ ಉಪಸ್ಥಿತಿಯಲ್ಲಿ ಜಿಲ್ಲಾ ಮಾದಕ ವಸ್ತು ವಿಲೇವಾರಿ ಕಮಿಟಿ ಮೂಲಕ ಇವುಗಳ ವಿಲೇವಾರಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


Share with

Leave a Reply

Your email address will not be published. Required fields are marked *