ಮಂಗಳೂರು: ದಶಕಗಳ ಪ್ರಮುಖ ಬೇಡಿಕೆಯಾಗಿರುವ ಮಂಗಳೂರು-ಕಬಕ ಪ್ಯಾಸೆಂಜರ್ ರೈಲು ಸೇವೆ ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಇದರಿಂದ ಮಂಗಳೂರು-ಪುತ್ತೂರು-ಸುಬ್ರಹ್ಮಣ್ಯ ನಡುವೆ ಪ್ರತಿದಿನ ಸಂಚರಿಸುವ ಪ್ರಯಾಣಿಕರು ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹೋಗುವ ಯಾತ್ರಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.

ಹೊಸ ವೇಳಾಪಟ್ಟಿ ಪ್ರಕಾರ ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು(56625) ಮುಂಜಾನೆ 4 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ ಮುಂಜಾನೆ 5.18ಕ್ಕೆ ತಲುಪಲಿದೆ. ಅಲ್ಲಿ 2 ನಿಮಿಷ ನಿಲುಗಡೆಯಾಗಿ ಬೆಳಗ್ಗೆ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಸುಬ್ರಹ್ಮಣ್ಯ-ಮಂಗಳೂರು(56626) ಪ್ಯಾಸೆಂಜರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯದಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. ಅಲ್ಲಿ 2 ನಿಮಿಷ ನಿಲುಗಡೆಯಾಗಿ 9.30ಕ್ಕೆ ಮಂಗಳೂರು ಸೆಂಟ್ರಲ್‌ಗೆ ತಲುಪಲಿದೆ.