ಶೀಘ್ರದಲ್ಲಿಯೇ ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧ

Share with

ಮಂಗಳೂರು: ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ರೈಲು ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ.

ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧ.

ಅದೇ ರೀತಿ ಬೆಂಗಳೂರು ಮಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿಯೇ ಬೇಡಿಕೆಯೂ ಈಡೇರಲಿದೆ. ಜಿಲ್ಲೆಯ ನಾಗರಿಕರ ಬೇಡಿಕೆ ಈಡೇರಿಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸುವುದಾಗಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ತಿಳಿಸಿದ್ದಾರೆ.

ರೈಲ್ವೆ ಇಲಾಖೆಯ ಮುಂದೆ ಮಂಗಳೂರು-ಮಡಗಾಂವ್, ಮಂಗಳೂರು-ಎರ್ನಾಕುಲಂ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುವ ಪ್ರಸ್ತಾವನೆ ಇತ್ತು. ಆದರೆ ಈಗ ಸಂಸದರು ಮಾಡಿರುವ ಟ್ವೀಟ್ ಅನ್ವಯ ಮಡಗಾಂವ್-ಮಂಗಳೂರು ನಡುವೆ ಹೊಸ ವಂದೇ ಭಾರತ್ ರೈಲು ಸಂಚಾರ ಶೀಘ್ರವೇ ಆರಂಭವಾಗಲಿದೆ. ಈಗಾಗಲೇ ದೇಶಾದ್ಯಂತ ವಂದೇ ಭಾರತ್ ರೈಲುಗಳು ಸಂಚಾರ ನಡೆಸುತ್ತಿವೆ. ಎಲ್ಲಾ ರಾಜ್ಯಗಳಿಂದಲೂ ಈ ರೈಲಿಗೆ ಬೇಡಿಕೆ ಬರುತ್ತಿದೆ.

ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರು-ಮಡಗಾಂವ್ ನಡುವೆ ರೈಲು ಸಂಪರ್ಕ ಒದಗಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.


Share with

Leave a Reply

Your email address will not be published. Required fields are marked *