ಮಂಗಳೂರು: ನಗರದ ಹೊರವಲಯದ ವಲಚ್ಚಿಲ್ ಬಳಿಯ ಖಾಸಗಿ ಕಾಲೇಜೊಂದರ ಹಾಸ್ಟೆಲ್ ನಲ್ಲಿ ಫುಡ್ ಪಾಯಿಸನ್ ನಿಂದಾಗಿ ಕೆಲವು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬುಧವಾರ ನಡೆದಿರುವುದಾಗಿ ವರದಿಯಾಗಿದೆ.
ಫೆ.7 ರಂದು ರಾತ್ರಿ ವೇಳೆ ವಿದ್ಯಾರ್ಥಿಗಳಿಗೆ ವಾಂತಿ ಭೇದಿ ಉಂಟಾದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಹಾಸ್ಟೆಲ್‌ಗೆ ತೆರಳಿ ಪರಿಶೀಲನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. ಬಹುತೇಕರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಹೇಳಲಾಗಿದೆ.