Mangaluru: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಸಮರ್ಥನೆ ಮಾಡಿ ಮಂಗಳೂರಿನಲ್ಲಿ ಫೇಸ್‌ಬುಕ್‌ ಪೇಜ್‌ನಲ್ಲಿ ಬರಹ; ಪ್ರಕರಣ ದಾಖಲು

Share with

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಲಾಗಿದೆ. ಇದರ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲದ ಸತೀಶ್‌ ಕುಮಾರ್‌ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಬಿಎನ್‌ಎಸ್‌ ಸೆಕ್ಷನ್‌ 192 ಮತ್ತು 353 (b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಚ್ಚು ಮಂಗಳೂರು ಎಂಬ ಫೇಸ್‌ಬುಕ್‌ ಪೇಜ್‌ನಲ್ಲಿ 2023 ರಲ್ಲಿ ಮಹಾರಾಷ್ಟ್ರದ ಪಾಲ್ಗರ್‌ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್‌ ಸಿಂಗ್‌ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್‌ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಪೋಸ್ಟ್‌ ಹಾಕಲಾಗಿದೆ. ಈ ಪೋಸ್ಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೇಸ್‌ಬುಕ್‌ ಪೇಜ್‌ ಡಿಪಿಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈತ ಕೊಣಾಜೆ ನಿವಾಸಿಯಾಗಿದ್ದಾನೆ.


Share with

Leave a Reply

Your email address will not be published. Required fields are marked *