ಮಂಗಳೂರು: ಯುವಕನೋರ್ವನಿಗೆ ಚೂರಿ ಇರಿದು ಗಾಯಗೊಳಿಸಿದ ಘಟನೆಯೊಂದು ನಗರದ ಹೊರವಲಯದ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ .
ಗಾಯಾಳು ಯುವಕನನ್ನು ಬಜ್ಪೆ ಕಳವಾರು ನಿವಾಸಿ ಸಫ್ವನ್ (23) ಎಂದು ಗುರುತಿಸಲಾಗಿದೆ.ಗಾಯಾಳು ಯುವಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.