ಮಂಗಳೂರು : ಅಕ್ರಮ ಗೋ ಸಾಗಾಟ ತಡೆದ ಬಜರಂಗದಳದ ಕಾರ್ಯಕರ್ತರು

Share with

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಮಂಗಳೂರಿನ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಮಾ.28 ರಂದು ನಡೆದಿದೆ.

ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಗೂಡ್ಸ್ ವಾಹನದಲ್ಲಿ ಕಾಲುಗಳನ್ನು ಕಟ್ಟಿ ಅಮಾನುಷವಾಗಿ 25 ಗೋವುಗಳನ್ನು ಸಾಗಿಸುತ್ತಿರುವುದು ತಿಳಿದಿದೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ವಾಹನದಲ್ಲಿದ್ದ ಗೋವುಗಳನ್ನು ರಕ್ಷಣೆ ಮಾಡಿದ ಕಾರ್ಯಕರ್ತರು ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *