ಮಂಗಳೂರು: ಬೀದಿ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಂಗಳೂರು ಪಾಲಿಕೆಯ ಆಯುಕ್ತರ ಕಚೇರಿಗೆ ಗುರುವಾರ ಮುತ್ತಿಗೆ ಹಾಕಿದ್ದು, ನೂರಾರು ಸಂಖ್ಯೆಯಲ್ಲಿ ಆಗಮಿಸಿದ ವ್ಯಾಪಾರಸ್ಥರು ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿದರು.
ಬೀದಿ ಬದಿ ವ್ಯಾಪಾರದ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡಿರುವ ಐಡಿ ಮುದ್ರಣಗೊಂಡಿದ್ದರೂ ವ್ಯಾಪಾರಸ್ಥರಿಗೆ ದೊರಕಲಿಲ್ಲ. ವರ್ಷ ಕಳೆದರೂ ಗುರುತಿನ ಚೀಟಿ ನೀಡದ ಹಿನ್ನೆಲೆಯಲ್ಲಿ ಪಾಲಿಕೆ ವಿರುದ್ಧ ವ್ಯಾಪಾರಸ್ಥರು ಆಕ್ರೋಶ ಹೊರಹಾಕಿದರು.
ಪಾಲಿಕೆ ಆಯುಕ್ತ ಆನಂದ್ ಅವರು ಮಾತನಾಡಿ ಈ ತಿಂಗಳ ಒಳಗೆ ಗುರುತಿನ ಚೀಟಿ, ಪ್ರಮಾಣ ಪತ್ರ ನೀಡುವ ಭರವಸೆಯನ್ನು ನೀಡಿದರು.