ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ “ಮಂಗಳೂರು ದಸರಾ” ಸಂಭ್ರಮದ ಬೃಹತ್ ಶೋಭಾಯಾತ್ರೆ ಅ.24ರಂದು ಸಂಜೆ 4ಕ್ಕೆ ಪ್ರಾರಂಭವಾಗಿ ಅ.25ರ ಮುಂಜಾನೆ ಶಾರದೆಯ ಜಲಸ್ತಂಭನದ ಮೂಲಕ ಸಮಾಪ್ತಿಗೊಳ್ಳಲಿದೆ.
ಶೋಭಾಯಾತ್ರೆಯಲ್ಲಿ ಹಲವು ಸ್ತಬ್ಧಚಿತ್ರಗಳು, ಈ ಮೆರವಣಿಗೆಗೆ ರಾಜ್ಯದ ನಾನಾ ಕಡೆಯಿಂದ ಆಗಮಿಸುವ ಕಲಾತಂಡಗಳು, ಹುಲಿ ವೇಷ ಹಾಗೂ ಇತರ ವೇಷದ ಟ್ಯಾಬ್ಲೊಗಳು, ವೇಷಭೂಷಣಗಳು, ಚೆಂಡೆ ತಂಡಗಳು ಮೆರುಗು ನೀಡಲಿವೆ.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ.ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ನಡೆಯುವ ಶೋಭಾ ಯಾತ್ರೆಯಲ್ಲಿ 2 ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾಗುವ ನಿರೀಕ್ಷೆ ಇದೆ.