ಪುತ್ತೂರು: ತಿಂಗಳ ಹಿಂದೆಯಷ್ಟೇ ಐವರು ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು, ಇದೀಗ ಮತ್ತೊಬ್ಬ ಕಾರ್ಯಕರ್ತನಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ತಾಲೂಕಿನ ನೆಟ್ಟಣಿಗೆ ನಿವಾಸಿಯಾಗಿರುವ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಪ್ರವೀಶ್ ಕುಮಾರ್ ನಾಯರ್ ಎಂಬಾತನಿಗೆ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.
ಸದ್ಯ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್ ಅವರಿಗೆ ಡಿಸೆಂಬರ್ 20ರಂದು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನೋಟೀಸ್ ನಲ್ಲಿ ಸೂಚಿಸಲಾಗಿದೆ. ಪೊಲೀಸರ ನಡೆಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.