
ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು
ಎ.26 ರಂದು ನಡೆಯಲಿದೆ. ಈ ಚುನಾವಣೆಯು ಒಕ್ಕೂಟದ ನೋಂದಾಯಿತ ಕೇಂದ್ರ ಕಚೇರಿಯ ಆವರಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ.
ಚುನಾವಣಾ ಅಧಿಕಾರಿಗಳು ಚುನಾವಣೆಯ ವೇಳಾಪಟ್ಟಿಯನ್ನು ಮಾ.17 ರಂದು ಪ್ರಕಟ ಮಾಡಿದ್ದಾರೆ. ಎಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭ, ನಾಮಪತ್ರವನ್ನು ಹಿಂಪಡೆಯಲು ಇಚ್ಛಿಸುವವರಿಗೆ ಎಪ್ರಿಲ್ 19 ರ ಮಧ್ಯಾಹ್ನ 3 ಗಂಟೆಯ ತನಕ ಅವಕಾಶವಿದೆ.
ಮತದಾನ ಪ್ರಕ್ರಿಯೆಯು ಎಪ್ರಿಲ್ 26 ರಂದು ಕುಲಶೇಖರದಲ್ಲಿರುವ ಒಕ್ಕೂಟದ ಕೇಂದ್ರ ಕಚೇರಿ ಪ್ರಾಂಗಣದಲ್ಲಿ ನಡೆಯಲಿದೆ. ಎಣಿಕೆಯನ್ನು ಅದೇ ದಿನ ಚುನಾವಣಾ ಅಧಿಕಾರಿಗಳು ಕೈಗೊಳ್ಳಲಿದ್ದಾರೆ. ಮತ್ತು ಫಲಿತಾಂಶ ಪ್ರಕಟ ಮಾಡಲಿದ್ದಾರೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ.