ಮಂಗಳೂರು: ಹಮಾಸ್ ಉಗ್ರರಿಗೆ ಬೆಂಬಲ ಸೂಚಿಸಿ ಮಂಗಳೂರಿನ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಘಟನೆ ವರದಿಯಾಗಿದೆ. ವಿಡಿಯೋ ಹರಿಬಿಟ್ಟ ವ್ಯಕ್ತಿಯನ್ನು ಮಂಗಳೂರಿನ ಝಾಕಿರ್ ಎಂದು ಗುರುತಿಸಲಾಗಿದ್ದು, ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳೆಂದು ಕರೆದಿದ್ದಾನೆ.
ಅಲ್ಲದೆ ಹಮಾಸ್ ಉಗ್ರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ್ದು ಪ್ಯಾಲಿಸ್ಟೈನ್, ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸೋಣ, ಹಮಾಸ್ ಉಗ್ರರು ದೇಶ ಪ್ರೇಮಿ ಯೋಧರು ಎಂದು ಬಣ್ಣಿಸಿದ್ದಾನೆ. ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬಾನ್ ಎಂಬ ಹೆಸರಿನಲ್ಲಿ ಝಾಕಿರ್ ಗುರುತಿಸಿಕೊಳ್ಳುತ್ತಿದ್ದ. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ ಝಾಕಿರ್ ಕರೆ ನೀಡಿದ್ದಾನೆ. ಇನ್ನು ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಸಂಘಟನೆಗಳಿಂದಲೂ ಭಾರೀ ವಿರೋಧ ವ್ಯಕ್ತವಾಗಿದೆ. ಝಾಕಿರ್ ನನ್ನು ಈ ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿವೆ ಎಂದು ತಿಳಿದು ಬಂದಿದೆ.