
ಮಂಗಳೂರು: ಮುತ್ತೂಟ್ ಫೈನಾನ್ಸ್ ಕಚೇರಿ ದರೋಡೆಗೆ ಯತ್ನಿಸಿದ ಘಟನೆ ಮಾ. 29 ರಂದು ದೇರಳಕಟ್ಟೆ ಜಂಕ್ಷನ್ನಲ್ಲಿ ನಡೆದಿದೆ.
ಆದ್ರೆ ಖದೀಮರು ಬೀಗ ಒಡೆಯುತ್ತಿರುವಾಗಲೇ ಫೈನಾನ್ಸ್ ಮಳಿಗೆಯ ಸೈರನ್ ಮೊಳಗಿದ್ದು ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.
ಇಬ್ಬರು ಆರೋಪಿಗಳಾದ ಕೇರಳದ ಕಾಂಞಂಗಾಡ್ ಮೂಲದ ಮುರಳಿ ಮತ್ತು ಕಾಸರಗೋಡು ನಿವಾಸಿ ಹರ್ಷದ್ ಎಂಬವರು ಕಟ್ಟಡದಲ್ಲಿ ಲಾಕ್ ಆಗಿದ್ದು ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳು ಮತ್ತು ಕೃತ್ಯ ಎಸಗಲು ತಂದಿದ್ದ ಡ್ರಿಲ್ ಮೆಷಿನ್ ಅನ್ನು ವಶಕ್ಕೆ ಪಡೆದಿದ್ದಾರೆ. ಮತ್ತೋರ್ವ ಆರೋಪಿ ಕಾಸರಗೋಡು ಮೂಲದ ಅಬ್ದುಲ್ ಲತೀಫ್ ಪರಾರಿಯಾಗಿದ್ದಾನೆ.ಮುರಳಿ ಮತ್ತು ಅಬ್ದುಲ್ ಲತೀಫ್ ಎಂಬ ಆರೋಪಿಗಳು ಕೇರಳದಲ್ಲಿ ಈ ಹಿಂದೆ ನಡೆದಿದ್ದ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರೋಪಿಗಳಾಗಿದ್ದರು ಎನ್ನುವ ಮಾಹಿತಿಯಿದೆ.