ಮಂಗಳೂರು: ಸುರತ್ಕಲ್‌ನ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ರೌಡಿ ಶೀಟರ್ ಆಗಿರುವ ಸುಹಾಸ್ ಶೆಟ್ಟಿ ಮೇಲೆ ಮಾರಣಾಂತಿಕ ತಲವಾರು ದಾಳಿ ನಡೆದ ಘಟನೆ ಮಂಗಳೂರು ಹೊರವಲಯದ ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ನಡೆದಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಸುಹಾಸ್‌ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
2022ರ ಜುಲೈ 28 ರಂದು ಸುರತ್ಕಲ್‌ನಲ್ಲಿ ಮೊಹಮ್ಮದ್ ಫಾಜಿಲ್ ಎಂಬ ಯುವಕನ ಬರ್ಬರ ಹತ್ಯೆ ನಡೆದಿತ್ತು. ಈ ಹತ್ಯೆಯು ಅದಕ್ಕೂ ಮುನ್ನ ನಡೆದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದಿದೆ ಎಂದು ಆರೋಪಿಸಲಾಗಿತ್ತು. ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದನು