Mangaluru: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ – ಆರೋಪಿಗಳ ವಿಚಾರಣೆ ವೇಳೆ ಸ್ಪೋಟಕ ಸತ್ಯ ಬಯಲು

Share with

ಮಂಗಳೂರಿನಲ್ಲಿ ಭೀಕರವಾಗಿ ಹತ್ಯೆಗೆ ಒಳಗಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ವಿಚಾರಣೆ ವೇಳೆ ಆರೋಪಿಗಳು ಸ್ಫೋಟಕ ಮಾಹಿತಿ ಒಂದನ್ನು ಬಿಚ್ಚಿಟ್ಟಿದ್ದಾರೆ.

ಹೌದು, ವಿಚಾರಣೆ ವೇಳೆ ಬೆಳಕಿಗೆ ಬಂದ ಮಾಹಿತಿಗಳನ್ನು ತಿಳಿಸಿರುವ ಪೊಲೀಸ್ ಆಯುಕ್ತರು ‘ಸಫ್ವಾನ್ ಪ್ರಮುಖ ಆರೋಪಿ. 2023ರಲ್ಲಿ ಅಬ್ದುಲ್ ಸಫ್ವಾನ್​ ಮೇಲೆ ಮಾರಣಾಂತಿಕ ಹಲ್ಲೆ ಆಗಿತ್ತು. ಸಫ್ವಾನ್​​ಗೆ ಸುಹಾಸ್ ಶೆಟ್ಟಿ ಕೊಲೆ ಮಾಡುವ ಆತಂಕ ಇತ್ತು. ಹಾಗಾಗಿ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲು ತೀರ್ಮಾನಿಸಿದ್ದರು. ಅದಕ್ಕಾಗಿ ಫಾಜಿಲ್​ ತಮ್ಮ ಆದಿಲ್ ಮೆಹರೂಫ್​ ನನ್ನು ಸಂಪರ್ಕಿಸಿ ಕೊಲೆ ಮಾಡಲು ತೀರ್ಮಾನಿಸಿದ್ದರು ಎಂದು ಹೇಳಿದ್ದಾರೆ.

ಅಲ್ಲದೆ ‘ಸುಹಾಸ್ ಕೊಲೆ ಮಾಡಲು ಸಫ್ವಾನ್​ ತಂಡಕ್ಕೆ ಆದಿಲ್ 5 ಲಕ್ಷ ರೂ. ನೀಡಿದ್ದ. ಈ 5 ಲಕ್ಷ ರೂಪಾಯಿಗಾಗಿ ಆದಿಲ್ ಫಂಡಿಂಗ್ ಮಾಡಿದ್ದ. ನಿಯಾಜ್ ಸ್ನೇಹಿತರಾದ ನಾಗರಾಜ್ ಮತ್ತು ರಂಜಿನ್ ಸಂಪರ್ಕ ಮಾಡುತ್ತಾರೆ. ಈ ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳ ಕಾಲ ವಾಸವಿದ್ದರು. ಮೇ 1ರಂದು ಸುಹಾಸ್ ಚಲನವಲನ ಗಮನಿಸಿ ಕೊಲೆ ಮಾಡಿದ್ದಾರೆ ಎಂದು ಅನುಪಮ್ ಅಗರ್ವಾಲ್ ತಿಳಿಸಿದರು.

ಇನ್ನು ಸುಹಾಸ್ ಶೆಟ್ಟಿ ಕೊಲೆ ಪ್ರಕಾರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ 8 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಇಬ್ಬರು ಹಿಂದೂ ಯುವಕರೂ ಸೇರಿದ್ದಾರೆ. ಮಂಗಳೂರು ಮೂಲದ ಸಫ್ವಾನ್‌ ಗ್ಯಾಂಗ್‌ ಸುಹಾಸ್‌ನನ್ನು ಹತ್ಯೆ ಮಾಡಿರುವುದು ಬಯಲಾಗಿದೆ. ಇನ್ನು ಬಂಧಿತರನ್ನು ಸಫ್ವಾನ್‌(29), ನಿಯಾಜ್‌(28),ಮೊಹಮ್ಮದ್‌ ಮುಝಂಮಿಲ್(‌32), ಕಲಂದರ್‌ ಶಾಫಿ(31), ಮೊಹಮ್ಮದ್‌ ಇರಜವಾನ್‌(28), ಚಿಕ್ಕಮಗಳೂರಿನ ರಂಜಿತ್(‌19)ಹಾಗೂ ನಾಗರಾಜ್‌(20) ಎಂದು ಗುರುತಿಸಲಾಗಿದೆ. ಇನ್ನು ಸಫ್ವಾನ್‌ ಈ ಹತ್ಯೆಯ ಪ್ರಮುಖ ಆರೋಪಿ ಎನ್ನಲಾಗಿದೆ.


Share with

Leave a Reply

Your email address will not be published. Required fields are marked *