Mangaluru: ಅನ್ವ‌ರ್ ಮಾಣಿಪ್ಪಾಡಿಗೆ ಬೆದರಿಕೆ ಕರೆ

Share with

ಮಂಗಳೂರು: ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಅವರಿಗೆ,ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಸ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ವಿಚಾರವಾಗಿ ಅನ್ವ‌ರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್ ಅಗರವಾಲ್ ಅವರಿಗೆ ದೂರು ನೀಡಿದ್ದಾರೆ.

X ಮೂಲಕ ಬಂದಿರುವ ಬೆದರಿಕೆ ಕರೆಯಲ್ಲಿ ಹಿಂದಿ, ಮರಾಠಿ, ಇಂಗ್ಲೀಷ್, ತುಳು ಹಾಗೂ ಉತ್ತರ ಭಾರತದ ಭಾಷೆಗಳಲ್ಲಿ ಕರೆ ಬಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಬೆದರಿಕೆ ಕರೆ ಮಾಡಿ ನೀವು ಹೆಚ್ಚು ದಿನ ಉಳಿಯುವುದಿಲ್ಲ, ನಿನ್ನ ಸಮುದಾಯ ನಿನ್ನನ್ನು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.


Share with

Leave a Reply

Your email address will not be published. Required fields are marked *