ವಿಟ್ಲ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಜು.25 ರಂದು ಮಧ್ಯಾಹ್ನ ನಡೆದಿದೆ.
ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು ಇವರು ಮುಂಬಾಯಿ ಮೂಲದವರೆಂದು ಹೇಳಲಾಗುತ್ತಿದೆ.
ಕಾರು ಮಂಗಳೂರುನಿಂದ ಮೈಸೂರಿ ಕಡೆಗೆ ತೆರಳುತ್ತಿದ್ದು ಪುತ್ತೂರು ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಈ ಭಾಗದಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಮಳೆಯಿಂದ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಇದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.