ವಿಟ್ಲ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ.
ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ.
ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ಮಾಡಿಕೊಂಡಿದ್ದು, ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ.
ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.