ಮಣಿಪಾಲ: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಯು ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಸಹಯೋಗದೊಂದಿಗೆ ಮಾನವ ಸರಪಳಿಯ ಮೂಲಕ ‘ಕ್ಯಾನ್ಸರ್ ಜಾಗೃತಿ ರಿಬ್ಬನ್’ ಕಾರ್ಯಕ್ರಮವನ್ನು ಆಯೋಜಿಸಿತು.
ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮಾತನಾಡಿ, ಕಸ್ತೂರ್ಬಾ ಆಸ್ಪತ್ರೆ ರೂಪಿಸಿದ ಮಾನವ ಸರಪಳಿ ರಚನೆಯು ಕೇವಲ ಸಾಂಕೇತಿಕ ಕಾರ್ಯಕ್ರಮವಲ್ಲ, ಇದು ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಮತ್ತು ತಡೆಗಟ್ಟುವ ಸಂಸ್ಕೃತಿಯನ್ನು ಬೆಳೆಸುವ ನಮ್ಮ ಬದ್ಧತೆಗೆ ಸಾಕ್ಷಿಯಾಗಿದೆ ಎಂದರು.