ಮಣಿಪಾಲ: ಪರೀಕ್ಷೆಯಲ್ಲಿ ನಕಲು; ಮನನೊಂದ ವಿದ್ಯಾರ್ಥಿ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Share with

ಮಣಿಪಾಲ: ಪರೀಕ್ಷೆ ಬರೆಯುವ ವೇಳೆ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿಯೋರ್ವ ಮನನೊಂದು ಕ್ಲಾಸ್ ರೂಮ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲ ಮಾಹೆಯ ಎಂಸಿಎಚ್‌ಪಿ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ, ಬಿಹಾರ ಮೂಲದ ಸತ್ಯಂ ಸುಮನ್ (20) ಮೃತದುರ್ದೈವಿ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಸತ್ಯಂ ಸುಮನ್, ಮೊಬೈಲ್ ಬಳಕೆ ಮಾಡಿದ್ದಾನೆ. ಇದನ್ನು ಕಂಡ ಶಿಕ್ಷಕರು ಆತನನ್ನು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *