ಇನ್ಸ್ಟಾಗ್ರಾಮ್​ ಪೋಸ್ಟ್ ನೋಡಿ ಬಾರ್ ಮೇಲೆ ಮಣಿಪಾಲ ಪೊಲೀಸರ ದಾಳಿ

Share with

ಪೊಲೀಸರು ಮಿಂಚಿನ ಕಾರ್ಯಾಚರಣೆಯನ್ನು ನಡೆಸಿ ಬಾರ್​ ಮೇಲೆ ದಾಳಿ ನಡೆಸಿದ್ದಾರೆ.

ಉಡುಪಿ: ಬಾರ್ ನಲ್ಲಿ ಅನುಮತಿ ಇಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ಮಣಿಪಾಲದ ವಿದ್ಯಾರ್ಥಿಗಳು ಪಾರ್ಟಿ ಮಾಡಿದ ಹಾಗೂ ಹುಕ್ಕಾ ಮತ್ತು ಮದ್ಯ ಸೇವನೆಯ ವಿಡಿಯೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ವೀಕೆಂಡ್ ಬಂದೋಬಸ್ತ್ ನಲ್ಲಿದ್ದ ಪೊಲೀಸರು ಮಿಂಚಿನ ಕಾರ್ಯಾಚರಣೆಯನ್ನು ನಡೆಸಿ ಬಾರ್​ ಮೇಲೆ ದಾಳಿ ನಡೆಸಿದ್ದಾರೆ.

ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಣಿಪಾಲ ಸರ್ಕಲ್ ಇನ್ಸ್ ಪೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ಡಿಜೆ ಪಾರ್ಟಿಗೆ ಅನುಮತಿ ನೀಡಿದ್ದಕ್ಕಾಗಿ ಬಾರ್ ಮಾಲೀಕನ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *