
ಕಾರ್ಕಳ : ಮಿಯ್ಯಾರು ಲವಕುಶ ಜೋಡುಕರೆ ಕಂಬಳ ಕೂಟವು ಮಾ.15ಶನಿವಾರ ಬೆಳಿಗ್ಗೆ 8.00ಗಂಟೆಯಿಂದ ಪ್ರಾರಂಭವಾಗಲಿದೆ ಎಂದು ಎಂದು ಮಿಯ್ಯಾರು ಕಂಬಳ ಸಮಿತಿಯ ಅಧ್ಯಕ್ಷರು ಹಾಗೂ ಕ್ಷೇತ್ರದ ಶಾಸಕರು ಆಗಿರುವ ವಿ. ಸುನಿಲ್ ಕುಮಾರ್ ಮತ್ತು ಕಾರ್ಯಾಧ್ಯಕ್ಷರಾಗಿರುವ ಜೀವನ್‌ದಾಸ್ ಅಡ್ಯಂತಾಯರವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ವರ್ಷ ಕೂಡ ಸುಮಾರು 250ಕ್ಕೂ ಹೆಚ್ಚು ಜೋಡಿ ಓಟದ ಕೋಣಗಳು ಭಾಗವಹಿಸುವ ನಿರೀಕ್ಷೆಯಿದ್ದು, ಜೊತೆಗೆ
ಕಂಬಳ ಕ್ಷೇತ್ರದಲ್ಲಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆಗೈದ ನಾಲ್ಕು ಜನ ಸಾಧಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು. ಈ ಕಂಬಳ ಕ್ರೀಡೋತ್ಸವಕ್ಕೆ ಎಲ್ಲಾ ಕೋಣಗಳ ಯಜಮಾನರಿಗೆ, ಓಟಗಾರರಿಗೆ, ಕಂಬಳ ಕ್ರೀಡಾ ಪ್ರೇಮಿಗಳಿಗೆ ಆತ್ಮೀಯ ಸ್ವಾಗತ ಎಂದು ಪ್ರಕಟಣೆಯಲ್ಲಿ ಕಂಬಳ ಸಮಿತಿ ತಿಳಿಸಿದ್ದಾರೆ.