ಕ್ರಿಸ್ಮಸ್ ಪ್ರಯುಕ್ತ ರಿಲೀಸ್ ಆದ ’45’ ಹಾಗೂ ‘ಮಾರ್ಕ್’ ಸಿನಿಮಾಗಳು ಮೊದಲ ದಿನವೇ ಅಬ್ಬರದ ಕಲೆಕ್ಷನ್ ಮಾಡಿವೆ. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸಿದೆ. ಶನಿವಾರ, ಭಾನುವಾರ ಮತ್ತು ಹೊಸ ವರ್ಷದಂದು ಈ ಚಿತ್ರ ಅಬ್ಬರದ ಕಲೆಕ್ಷನ್ ಮಾಡೋದು ಪಕ್ಕಾ ಎಂದು ಹೇಳಲಾಗುತ್ತಿದೆ.

ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟಾಗುತ್ತದೆ ಎಂಬ ಕುತೂಹಲ ಮೂಡಿದೆ. ‘ಮಾರ್ಕ್’ ಸಿನಿಮಾ ಮೊದಲ ದಿನ ₹6.28 ಕೋಟಿ ಗಳಿಕೆ ಮಾಡಿದರೆ 45 ಸಿನಿಮಾ ₹5 ಕೋಟಿ ಗಳಿಕೆ ಮಾಡಿದೆ ಎಂದು sacnilk ವರದಿ ಮಾಡಿದೆ.




