
ಪುತ್ತೂರು: ಮದುವೆ ದಿಬ್ಬಣದ ಟೆಂಪೊ ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪಾಲ್ತಾಡಿ ಬಳಿ ನಡೆದಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.




