ಬೆಂಗಳೂರು: ಜಮ್ಮುಕಾಶ್ಮೀರದಲ್ಲಿ ನಡೆದ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಅಂತ್ಯಕ್ರಿಯೆಯು ಸೇನಾ ಗೌರವಗಳೊಂದಿಗೆ ನ.25ರಂದು ನೆರವೇರಿತು.
ಸಾವಿರಾರು ಮಂದಿ ಆಗಮಿಸಿ ಹುತಾತ್ಮರಾದ ವೀರಯೋಧನಿಗೆ ಅಂತಿಮ ನಮನವನ್ನು ಸಲ್ಲಿಸಿದರು. ಅಮರ್ ರಹೇ ಘೋಷಣೆಯೊಂದಿಗೆ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಅಂತ್ಯಕ್ರಿಯೆ ನೆರವೇರಿತ
ನ.24ರಂದು ಬೆಳಗ್ಗೆಯಿಂದ ಜಿಗಣಿ ಸಮೀಪದ ನಂದನವನದಲ್ಲಿನ ಕ್ಯಾಪ್ಟನ್ ಪ್ರಾಂಜಲ್ ಅವರ ನಿವಾಸದ ಮುಂಭಾಗದಲ್ಲಿ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ನಿವಾಸದಿಂದ ತೆರೆದ ವಾಹನದಲ್ಲಿ ಅಂತಿಮ ಯಾತ್ರೆಯನ್ನು ನಡೆಸಲಾಯಿತು.
ಜಿಗಣಿ ಓಟಿಸಿ ಸರ್ಕಲ್, ಬನ್ನೇರುಘಟ್ಟ ಮುಖ್ಯ ರಸ್ತೆ, ನೈಸ್ ರೋಡ್, ಕೋನಪ್ಪನ ಅಗ್ರಹಾರ ಸರ್ಕಲ್, ಕೂಡ್ಲುಗೇಟ್ ಮೂಲಕ ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಅಂತಿಮ ಯಾತ್ರೆ ನಡೆಯಿತು. ಮಾರ್ಗದುದ್ದಕ್ಕೂ ನಿಂತಿದ್ದ ಜನರು ತ್ರಿವರ್ಣ ಧ್ವಜ ಹಿಡಿದು ಅಂತಿಮ ನಮನ ಸಲ್ಲಿಸಿದರು.
ಬಳಿಕ ಸರ್ಕಾರಿ ಗೌರವಗಳೊಂದಿಗೆ ಸೋಮಸುಂದರಪಾಳ್ಯದಲ್ಲಿನ ವಿದ್ಯುತ್ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಕ್ಯಾಪ್ಟನ್ ಪ್ರಾಂಜಲ್ ಅವರ ಅಂತ್ಯಕ್ರಿಯೆಯು ನೆರವೇರಿತು.