
ಮಹಾರಾಷ್ಟ್ರದ ಬೆಂಗಳೂರು – ಪುಣೆ ಹೈವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ನವಲೆ ಸೇತುವೆ ಪ್ರದೇಶದಲ್ಲಿ ಟ್ರಕ್‌ವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಭಾರೀ ಬೆಂಕಿ ಹೊತ್ತಿಕೊಂಡಿದ್ದು, 8 ಮಂದಿ ಸಜೀವ ದಹನವಾಗಿದ್ದಾರೆ.

ಈ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಂಕಿಯಲ್ಲಿ 6 ವಾಹನಗಳು ಸಂಪೂರ್ಣವಾಗಿ ಸುಟ್ಟು ಹೋಗಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಈ ಘಟನೆ ಹೈವೇಯ ಸೆಲ್ಫಿ ಪಾಯಿಂಟ್ ಬಳಿ ನಡೆದಿರುವುದಾಗಿ ವರದಿಯಾಗಿದೆ.




